Bahumuki

· Storyside IN · Narratzailea: Multiple
Audio-liburua
1 h 23 min
Laburtu gabe
Egokia
Balorazioak eta iritziak ez daude egiaztatuta  Lortu informazio gehiago
Lagin bat (4 min) nahi al duzu? Entzun ezazu edonoiz, baita konexiorik gabe ere. 
Gehitu

Audio-liburu honi buruz

'ಬಹುಮುಖಿ' ವಿವೇಕ ಶಾನಭಾಗ ಅವರ ನಾಟಕಕೃತಿ. ಅಕ್ಷರ ಪ್ರಕಾಶನದಿಂದ 2008ರಲ್ಲಿ ಪ್ರಕಟಗೊಂಡ ಈ ಕೃತಿ 2020ರಲ್ಲಿ ಮತ್ತೆ ಮರುಮುದ್ರಣಗೊಂಡಿದೆ. ಇದು ಈವತ್ತಿನ ಕಾಲದಲ್ಲಿ ಜರುಗುವ ನಾಟಕ. ರೋಚಕ ಕಥೆಯೊಂದರ ಬೆನ್ನಟ್ಟಿ ಹೋದ ಪತ್ರಕರ್ತನೊಬ್ಬನಿಗೆ ಎದುರಾಗುವ ಜಗತ್ತು ಇಲ್ಲಿ ಹಲವು ಪಾತಳಿಗಳಲ್ಲಿ ಬಿಚ್ಚಿಕೊಳ್ಳುತ್ತ ಹೋಗುತ್ತದೆ. ಅವನು ಸೃಷ್ಟಿಸಿದ ಸುದ್ದಿಯ ಮುಖಾಂತರ ಅವರ ಜೀವನದೊಳಕ್ಕೆ ತರುತ್ತಾರೆ ಮತ್ತು ಆ ಮೂಲಕ ಪಲ್ಲಟದ ನೋವು, ಶಹರದ ಬದುಕಿನ ಢಾಂಬಿಕತೆ, ಪೊಳ್ಳು ಸಂಬಂಧಗಳ ಅಸಹನೀಯತೆ, ನಗರವೆಂಬ ಬೆಂಕಿಯೊಳಗೆ ಧಾವಿಸಿ ಬಿದ್ದು ಉರಿದು ಹೋಗುತ್ತಿರುವ ಜೀವನಕ್ರಮಗಳು ಅನಾವರಣಗೊಳ್ಳುತ್ತವೆ. ನಮ್ಮ ದಿನನಿತ್ಯಗಳನ್ನು ಅನೇಕ ವಿಧಗಳಲ್ಲಿ ಪ್ರಭಾವಿಸುತ್ತಿರುವ ಮಾಧ್ಯಮಗಳು, ಅವು ಹುಟ್ಟಿಸಿದ ಭ್ರಮಾಲೋಕದಲ್ಲಿ ತಾಳತಪ್ಪಿದ ಸಂಬಂಧಗಳು, ಇತಿಹಾಸ-ಕಥನ-ನೆನಪುಗಳನ್ನು ಕುಶಲ ಕುತಂತ್ರದಿಂದ ಬಳಸುವ ಜನರು ನಾಟಕದುದ್ದಕ್ಕೂ ಹಲವು ವೇಶಗಳಲ್ಲಿ ಬರುತ್ತಾರೆ. ಯಾವುದು ಕಥನ, ಯಾವುದು ಇತಿಹಾಸ, ಯಾವುದು ವೈಯಕ್ತಿಕ ದುರಂತ, ಯಾವುದು ಜೀವನೋಪಾಯದ ಕಾಯಕ ಅನ್ನುವುದು ಸ್ಪಷ್ಟವಾಗದ, ಯಾರು ಯಾರನ್ನು ಉಪಯೋಗಿಸಿಕೊಳ್ಳುತ್ತಿದ್ದಾರೆಂದು ತಿಳಿಯದ ವಿಶ್ವದೊಳಗೆ ಈ ನಾಟಕವಿದೆ.

Baloratu audio-liburua

Eman iezaguzu iritzia.

Informazioa entzutea

Telefono adimendunak eta tabletak
Instalatu Android eta iPad/iPhone gailuetarako Google Play Liburuak aplikazioa. Zure kontuarekin automatikoki sinkronizatzen da, eta konexioarekin nahiz gabe irakurri ahal izango dituzu liburuak, edonon zaudela ere.
Ordenagailu eramangarriak eta mahaigainekoak
Google Play-en erositako liburuak ordenagailuaren web-arakatzailean irakur ditzakezu.