Rushyashrunga

· Storyside IN · කථනය Shrunga B V විසින්
ශ්‍රව්‍යපොත
පැය 4 මිනි 34
අසංක්‍ෂිප්ත
සුදුසුකම් ලබයි
ඇගයීම් සහ සමාලෝචන සත්‍යාපනය කර නැත වැඩිදුර දැන ගන්න
මිනි 4ක සාම්පලයක් අවශ්‍යද? ඕනෑම වේලාවක, නොබැඳිව පවා සවන් දෙන්න. 
එක් කරන්න

මෙම ශ්‍රව්‍ය පොත ගැන

ಡಿಯರ್ ಋಷ್ಯಶೃಂಗ... ಕೆಲವು ಕಲ್ಪಗಳ ಹಿಂದೆ ನಿನ್ನ ಬಗ್ಗೆ ಓದಿದ ನೆನಪು. ನಿನ್ನ ತಲೆಯಲ್ಲಿ ಕೊಂಬಿತ್ತೆಂದು ಒಂದು ಕತೆ. ಜಿಂಕೆಗೆ ಹುಟ್ಟಿದ್ದಕ್ಕೆ ಹೀಗೆಂದು ವ್ಯಾಖ್ಯೆ. ಬರಕ್ಕೀಡಾಗಿ ಕಂಗೆಟ್ಟ ನಾಡಿಗೆ ಮಳೆ ತಂದೆಯೆಂದು ಉಪಾಖ್ಯಾನ. ಜಗತ್‌ಸೃಷ್ಟಿಯಲ್ಲಿ ಹೆಣ್ಣೆಂಬ ವಿಲಿಂಗಿಯುಂಟೆಂದೇ ನೀನು ಕಂಡಿದ್ದಿಲ್ಲವೆಂದು ಇನ್ನೂ ಒಂದು ಕತೆ. ದಶರಥನ ಪುತ್ರಕಾಮೇಷ್ಠಿಯ ಅಧ್ವರ್ಯು ನೀನಾಗಿದ್ದೆಯೆಂದು ಇನ್ನೆಲ್ಲೋ ಉಲ್ಲೇಖ. ಶೃಂಗೇರಿ-ಕಿಗ್ಗಗಳ ಸ್ಥಳಪುರಾಣದಲ್ಲಿ ನಿನ್ನ ಪ್ರಸ್ತಾಪ... ಹೀಗೆ, ಹತ್ತಾರು ಕಾಲದೇಶಗಳ ಪುರಾಣದಲ್ಲಿ ಅಷ್ಟಿಷ್ಟು ಓದರಿತಿದ್ದ ನಿನ್ನನ್ನು ಹೀಗಿನ್ನೊಂದಾಗಿ ಕಂಡೇನೆಂದುಕೊಂಡಿರಲಿಲ್ಲ. ನಿಜಕ್ಕೂ ಬೆರಗಾಯಿತು. ಮರುಳ ನೀನು. ಹುಚ್ಚಾಪಟ್ಟೆ. ಎಣಿಕೆಗೆ ಸಿಗದವನು. ನಿಲುಕಿಗೆಟುಕದವನು. ಇಕೋ ಇಕೋ- ಇನ್ನೇನು ಹಿಡಿದೇಬಿಟ್ಟೇನೆಂದುಕೊಂಡರೆ ಮೀನಿನಂತೆ... ಅಲ್ಲಲ್ಲ ಸೊಳ್ಳೆಯಂತೆ ನುಣುಚಿಕೊಂಡವನು. ಏನೆಂದು ತಿಳಿಯದ, ತಿಳಿಸಿಯೂ ತಿಳಿಯಗೊಡದ- ತಿಳಿಯಾಗದ ಕೊಳದಂತಿರುವ, ಈ ನಿನ್ನ ಕತೆಯೇನು ಮಾರಾಯ? ಮರುಳಿಗೂ ಮೆಥಡುಂಟೆಂದು ಅಂದಕೊಂಡವನು ನಾನು. ಹಾಗಂದುಕೊಂಡ ಮೂಢನೇ ನಾನಿರಬಹುದು. ನಿನ್ನ ಈ ಹೊಸಕತೆಯನ್ನು ಓದಿದಾಗ ನಿನಗೊಂದು ನಿಗದಿಯ ಮೆಥಡೇ ಇಲ್ಲವೆಂದು ಅನಿಸಿಬಿಟ್ಟಿತಲ್ಲ, ಗುರೂ, ಇದಕ್ಕೇನನ್ನಲಿ? ಕಂಗೆಟ್ಟೆ. ಕೆಲವೊಮ್ಮೆ ಕಂಗಾಲಾದೆ. ಇಷ್ಟಿದ್ದೂ, ನಾನೆಣಿಸಿದ ನಿಗದಿ ನಿಖರತೆಯೆಲ್ಲ ನಿನ್ನಂಥವರಿಗಲ್ಲವೆಂಬುದು, ಕಡೆಗೆ, ನನಗೆ ನಾನೇ ಅಂದುಕೊಂಡ ಮೆಥಡು. ಆದರೂ, ರಿಷಿ... ನಿನಗೊಂದು ಬಂಧ ಬೇಕಿತ್ತು. ಘಟನೆಯಿಂದ ಘಟನೆಗೆ, ಪಾತ್ರದಿಂದ ಪಾತ್ರಕ್ಕೆ, ಕಥನದಿಂದ ಕಥನಕ್ಕೆ ಲಂಘಿಸುವ ನಿನಗೊಂದು ಒಟ್ಟಾದ ಬಂಧ ಬೇಕಿತ್ತು. ಒನ್ನಮೂನೆ ಒಗ್ಗಟ್ಟು. ಅದೇ ಮಿಸ್ಸಾಯಿತೆಂದರೆ ನಿನ್ನ ನಿಜದ ಕತೆಯೇನೆಂಬುದು ನನ್ನನ್ನು ಕಾಡುವ ಶಾಶ್ವತಸತ್ಯವೇನೋ.. ಅಥವಾ, ಶಾಶ್ವತ`ಸದ್ಯ'ವೇ? ಇರಲಿ. ಈ ಬೆಂಗಳೂರು ನಿನ್ನನ್ನು ಕಾಡಿರುವಷ್ಟೇ- ಬಹುಶಃ ಇನ್ನೂ ಹೆಚ್ಚು, ನನ್ನನ್ನು ಕೆಣಕಿರುವುದು ಹೌದು. ಆದರೆ, ಇನ್ನೂ ಮದುವೆಗಣಿಯಾಗದ ಅವಸ್ಥೆಯಲ್ಲಿರುವ ನೀನು, ನಿನ್ನಂಥವರು ಕಾಣುವ ಈ ಶಹರ, ಶಾಹರಿಕತೆ ನನ್ನಲ್ಲಿ ಬೆರಗು ಹುಟ್ಟಿಸುತ್ತದೆ.

මෙම ශ්‍රව්‍ය පොත අගයන්න

ඔබ සිතන දෙය අපට කියන්න.

සවන් දීමේ තොරතුරු

ස්මාර්ට් දුරකථන සහ ටැබ්ලට්
Android සහ iPad/iPhone සඳහා Google Play පොත් යෙදුම ස්ථාපනය කරන්න. එය ඔබේ ගිණුම සමඟ ස්වයංක්‍රීයව සමමුහුර්ත කරන අතර ඔබට ඕනෑම තැනක සිට සබැඳිව හෝ නොබැඳිව කියවීමට ඉඩ සලසයි.
ලැප්ටොප් සහ පරිගණක
ඔබගේ පරිගණකයේ වෙබ් බ්‍රව්සරය භාවිතයෙන් Google Play මත මිලදී ගත් පොත් ඔබට කියවිය හැක.